Site icon PowerTV

ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರ್ಘಟನೆ : ಮತ್ತೊಬ್ಬ ಅಭಿಮಾನಿ ಸಾವು!

ಗದಗ : ನಟ ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆಯ ಬೆನ್ನಲ್ಲೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಯಶ್ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ ವಾಪಸ್ ಆಗುತ್ತಿದ್ದಾಗ ಪೊಲೀಸ್ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಮತ್ತೊಬ್ಬ ಅಭಿಮಾನಿ ಕೊನೆಯುಸಿರೆಳೆದಿದ್ದಾನೆ.

ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದ ನಿಖಿಲ್ (22) ಎಂದು ಗುರುತಿಸಲಾಗಿದೆ. ಗದಗ ಮುಳುಗುಂದ ರಸ್ತೆಯಲ್ಲಿ ಯಶ್ ಬೆಂಗಾವಲು (ಪೊಲೀಸ್ ಬೆಂಗಾವಲು ವಾಹನ) ವಾಹನಕ್ಕೆ ಬೈಕ್ (ಸ್ಕೂಟಿ) ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಯುವಕನನ್ನು ಕೂಡಲೇ ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ರಕ್ತಸ್ರಾವವಾಗಿದ್ದ ಕಾರಣ ಸದ್ಯ, ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮತ್ತೊಬ್ಬ ಅಭಿಮಾನಿ ದುರಂತ ಅಂತ್ಯ

ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಗ್ರಾಮಕ್ಕೆ ಭೇಟಿ ನೀಡಿದ ನಂತರ ಹುಬ್ಬಳ್ಳಿಯ ಜಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿ ಯಶ್ ಹಿಂದಿರುಗಿದ್ದಾರೆ. ಈ ದುರ್ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಅಭಿಮಾನಿ ದುರಂತ ಅಂತ್ಯಕಂಡಿದ್ದಾನೆ.

Exit mobile version