Site icon PowerTV

ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು : ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಕಾಂಗ್ರೆಸ್​ನವರೇ ನಿಜವಾದ ಹಿಂದೂಗಳು. ರಾಜಕಾರಣಕ್ಕೆ ಯಾವತ್ತೂ ಹಿಂದುತ್ವ ಹಾಗೂ ಶ್ರೀರಾಮನ ಹೆಸರು ಬಳಸಿಕೊಂಡಿಲ್ಲ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಲಕ್ಷಾಂತರ ರಾಮನ ದೇವಾಲಯಗಳಿವೆ. ಬಿಜೆಪಿಯವರಿಗೆ ಇತ್ತೀಚಿನ ದಿನಗಳಲ್ಲಿ ಶ್ರೀರಾಮನ ನೆನಪಾಗಿದೆ ಎಂದು ಕುಟುಕಿದ್ದಾರೆ.

ಬಿಜೆಪಿಯವರು ವೋಟ್​ಗಾಗಿ ರಾಮನ ನೆನಪು ಮಾಡಿಕೊಂಡಿದ್ದಾರೆ. ಸಾವಿರಾರು ವರ್ಷಗಳಿಂದ ನಾವು ಶ್ರೀರಾಮ ಆಂಜನೇಯ ಪೂಜೆ ಮಾಡ್ತಿದ್ದೀವಿ. ನಾವು ಧರ್ಮವನ್ನು ರಾಜಕೀಯಕ್ಕೆ ಬಳಸಿಕೊಳ್ಳಲ್ಲ. ಬಿಜೆಪಿಗೆ ಏನೂ ಬಂಡವಾಳ ಇಲ್ಲ, ಅದಕ್ಕೆ ಧರ್ಮ ತರುತ್ತಾರೆ. ನಾವು ಶ್ರದ್ಧಾ ಭಕ್ತಿಯಿಂದ ಶ್ರೀರಾಮನನ್ನು ಪೂಜೆ ಮಾಡುತ್ತೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬಸ್ ನಿಲ್ದಾಣ ನಿರ್ಮಾಣಕ್ಕೆ ಚಾಲನೆ

ಇದೇ ವೇಳೆ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಸಂತೋಷ್ ಲಾಡ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Exit mobile version