Site icon PowerTV

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು; ಇಬ್ಬರು ಅಯ್ಯಪ್ಪ ಭಕ್ತರ ಸಾವು

ವಿಜಯನಗರ: ಡಿವೈಡರ್​ಗೆ ಡಿಕ್ಕಿ ಹೊಡೆದು ಕಾರಿ ಪಲ್ಟಿಯಾಗಿ ಇಬ್ಬರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ಕೂಡ್ಲಿಗಿ ತಾಲೂಕಿನ ಕಾನಹೊಸಳ್ಳಿ‌ ಬಳಿ ಸಂಭವಿಸಿದೆ.

ಕಾರು ಕಾನಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ. ಮೃತಪಟ್ಟ ಅಯ್ಯಪ್ಪ ಭಕ್ತರನ್ನು ಗದಗ ಮೂಲದ ಯುವರಾಜ್ ಮತ್ತು ಚೆನ್ನವೀರ ಗೌಡ ಎಂದು ಗುರುತಿಸಲಾಗಿದೆ.

ಚಾಲಕನ ಅಜಾಗರೂಕತೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಘಟನೆಯ ವೇಳೆ ತೀವ್ರ ಗಾಯಗೊಂಡಿದ್ದ ಐವರನ್ನು ಜಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಇದನ್ನೂ ಓದಿ: ಮಗನ ಹತ್ಯೆ ಮಾಡಿ ಸೂಟ್ ಕೇಸ್​ನಲ್ಲಿ ರವಾನೆ: ಸಿಇಓ ಸುಚನಾ ಅರೆಸ್ಟ್!

ಆದರೆ, ಯುವರಾಜ್‌ ಮತ್ತು ಚೆನ್ನವೀರ ಗೌಡ ಅವರು ಮಾರ್ಗ ಮಧ್ಯೆ ಕೊನೆಯುಸಿರೆಳೆದರು. ಉಳಿದ ಮೂವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾನಾಹೊಸಳ್ಳಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Exit mobile version