Site icon PowerTV

ಮೋದಿ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗಳುತ್ತಾರೆ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ : ಪ್ರಧಾನಿ ನರೇಂದ್ರ ಯಾವಾಗ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಕಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಮ್ಮ ನೆರೆ ಹೊರೆಯ ದೇಶದವರನ್ನು ಬದಲಾಯಿಸಲಾಗುವುದಿಲ್ಲ. ಹಾಗಾಗಿ ಅವರೊಂದಿಗೆ ಚೆನ್ನಾಗಿರಬೇ ಕು. ನಾವು ಒಂದಾಗಿ ಹೋಗಬೇಕು. ಅವರು ನಮ್ಮ ಮೈಮೇಲೆ ಬಂದಾಗ ದೇಶಕ್ಕಾಗಿ ಹೋರಾಟಕ್ಕೂ ಸಿದ್ಧರಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ಅಂತರರಾಷ್ಟ್ರೀಯ ನೀತಿ ವಿಚಾರದಲ್ಲಿ ಮೋದಿಯವರು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಇಂದಿರಾ ಗಾಂಧಿ ಯಾವ ರೀತಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಅಂತಹ ಹೋರಾಟ ಮಾಡಬೇಕಾಗುತ್ತದೆ ಎಂದು ಟೀಕಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಫ್ರಾನ್ಸ್ ನೂತನ ಪ್ರಧಾನಿಯಾಗಿ ಗೇಬ್ರಿಯಲ್ ಅಟಲ್ ಆಯ್ಕೆ

ಕೆಟ್ಟ ಪರಿಸ್ಥಿತಿ ಬಂದ್ರೆ ಹೋರಾಟಕ್ಕೂ ಸಿದ್ಧ

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ನೆರೆ ಹೊರೆಯವರನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು. ಕೆಟ್ಟ ಪರಿಸ್ಥಿತಿ ಬಂದಾಗ ನಾವು ಹೋರಾಟಕ್ಕೂ ಸಿದ್ಧರಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Exit mobile version