Site icon PowerTV

ಜೈಲಿನಿಂದ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತೆ ಬಂಧನ!

ಬೆಂಗಳೂರು: ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗುತ್ತಿದ್ದಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಮತ್ತೆ ಬಂಧನವಾಗಿದೆ.

ಕಳೆದ 13 ದಿನಗಳಿಂದ ಪರಪ್ಪನ ಅಗ್ರಹಾರದಲ್ಲಿದ್ದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಇಂದು ಜೈಲಿಂದ ಹೊರಬರುತ್ತಿದ್ದಂತೆ ಅಗ್ರಹಾರದ ಜೈಲಿನ ಫಸ್ಟ್​​ ಗೇಟ್​ ಬಳಿ ಕುಮಾರಸ್ವಾಮಿ ಲೇಔಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ!

ಕರವೇ ಹೋರಾಟದ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿ ಮಾಡಿದ ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ವಿಚಾರಣೆಗಾಗಿ ಪೊಲೀಸರು ಕಳೆದ ಶನಿವಾರದಿಂದ ನಾರಾಯಣಗೌಡ ಅವರನ್ನು ಬಂಧಿಸಲು ಕಾಯುತ್ತಿದ್ದರು. ಇಂದು ಬೆಳಗ್ಗೆ ಜೈಲಿನಿಂದ ಹೊರಬರುತ್ತಿದ್ದಂತೆ ಬಂಧನ ಮಾಡಿ ಕರೆದೊಯ್ದಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಪರಪ್ಪನ ಅಗ್ರಹಾರದ ಸುತ್ತ ಪೊಲೀಸ್​ ಬಿಗಿ ಬಂದೊಬಸ್ತ್​ ವ್ಯವಸ್ಥೆ ಮಾಡಲಾಗಿದೆ.

Exit mobile version