Site icon PowerTV

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ!

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್​ರವರ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ರೂಂನ ಬೀರುವಿನಲ್ಲಿಟ್ಟಿದ್ದ 2.50 ಲಕ್ಷ ರೂ.ಗಳನ್ನು ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಇಟ್ಟಿದ್ದರು. ಆದ್ರೆ ಜನವರಿ 5ರಂದು ಹಣ ಕಳ್ಳತನವಾಗಿದೆ. ಎರಡು ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಎಷ್ಟು ಹುಡುಕಾಡಿದರೂ ಹಣ ಸಿಗದೇ ಇದ್ದಾಗ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ () ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ.

ಈ ಸಂಬಂಧ ಎಫ್‌ಐಆರ್ ಸಹ ದಾಖಲಾಗಿದೆ. ಮನೆ ಕೆಲಸದವರ ಮೇಲೆ ಕಸ್ತೂರಿ ಶೆಟ್ಟಿ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ, ಸದ್ಯ ಮನೆ ಕೆಲಸದಾಕೆ ರತ್ನಮ್ಮ ಅವರನ್ನು ವಿಚಾರಣೆ ನಡೆಸಿರುವ ಚಂದ್ರಲೇಔಟ್ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 

Exit mobile version