Site icon PowerTV

ಕೊರೋನಾಗೆ ಮೈಸೂರಿನಲ್ಲಿ ಓರ್ವ ಬಲಿ, 201 ಹೊಸ ಪ್ರಕರಣ ಪತ್ತೆ

ಬೆಂಗಳೂರು : ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದೆ. ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಉಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಕೇಸ್ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಕಾಸಸೌಧದ ಮುಂದೆ ಆತ್ಮಹತ್ಯೆಗೆ ಹೈಡ್ರಾಮಾ

ಪಾಸಿಟಿವಿಟಿ ದರ ಶೇ. 2.74

257 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Exit mobile version