Wednesday, August 27, 2025
HomeUncategorizedಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

ಯುವತಿಗೆ ಚಾಕ್ಲೆಟ್ ಕೊಟ್ಟದ್ದಕ್ಕೆ ಯುವಕನ ಮೇಲೆ ಹಲ್ಲೆ; ನಾಲ್ವರ ಬಂಧನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಿನ ದಿನಕ್ಕೂ ನೈತಿಕ ಪೊಲೀಸ್​ಗಿರಿ ಪ್ರಕರಣಗಳು ವರದಿಯಾಗುತ್ತಲ್ಲೇ ಇವೆ. 

ನಿನ್ನೆ ಸಂಜೆ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಮುಸ್ಲಿಂ ಯುವಕ ಹಿಂದೂ ಯುವತಿಗೆ ಚಾಕ್ಲೇಟ್​ ನೀಡಿದ ಎಂಬ ಕಾರಣಕ್ಕೆ ಹಿಂದೂ ಯುವಕರು ಆ ಯುವಕನ್ನು ಥಳಿಸಿ ನೈತಿಕ ಪೊಲೀಸ್​ಗಿರಿ ಮೆರೆದಿದ್ದರು.

ಕಾರಿನಲ್ಲಿ ಬಂದ ನಾಲ್ವರು ಯುವಕರು, ಹಲ್ಲೆ ನಡೆಸಿದ್ದಾರೆ. ಘಟನೆಯ ಬಗ್ಗೆ ಕೂಡಲೇ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಅಧಿಕಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಗಮಿಸಿದ ಪಿಎಸೈ ಮತ್ತು ಸಿಬ್ಬಂದಿ ಮುಂದಾಗುವ ಅನಾಹುತ ತಪ್ಪಿಸಿ ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ರಾಮ ಭಕ್ತರಿಗೆ ಗುಡ್ ನ್ಯೂಸ್; ಅಯೋಧ್ಯೆಯಲ್ಲಿ‌ ಕರ್ನಾಟಕ ಯಾತ್ರಿ ನಿವಾಸ

ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ನಾಲ್ವರ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ‌ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಬಸ್ ನಿಲ್ದಾಣದಲ್ಲಿ ಪುಂಡ ಯುವಕರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಯುವಕನೋರ್ವನ ಮೇಲೆ ನಡೆದ ಅನೈತಿಕ ಪೊಲೀಸ್‌ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಪೋಲಿಸ್ ಇಲಾಖೆ ಮಾಹಿತಿ ನೀಡಿದ್ದು, ಐಪಿಸಿ ಸೆಕ್ಷನ್ 143, 144, 148, 323, 324, 504, 506, 1490 ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದೆ. ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments