Site icon PowerTV

ರಾಮಮಂದಿರ ಉದ್ಘಾಟನೆ; ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್​ಗೆ ಆಮಂತ್ರಣ ಇದ್ರೂ ಹೋಗದೇ ಇರೋದು ದುರ್ದೈವದ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ. 

ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವ ಎಂದರು.

ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ. ರಾಮರಾಜ್ಯ ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ನುಡಿದರು.

 

Exit mobile version