Friday, August 29, 2025
HomeUncategorizedಜ.21ರಂದು ಕಾಂಗ್ರೆಸ್ ಬೃಹತ್ ಸಮಾವೇಶ

ಜ.21ರಂದು ಕಾಂಗ್ರೆಸ್ ಬೃಹತ್ ಸಮಾವೇಶ

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸಿದ್ಧತೆ ನಡೆಸಿದ್ದು, 28 ಕ್ಷೇತ್ರಗಳಲ್ಲಿ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಲು ಪಣ ತೊಟ್ಟಿದೆ.

ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ರೂಪಿಸುತ್ತಿದೆ. ಇದರ ಮುಂದುವರೆದ ಭಾಗವಾಗಿ ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ರಣಕಹಳೆ ಮೊಳಗಿಸಲು ಕಾಂಗ್ರೆಸ್ ಸಜ್ಜಾಗಿದೆ.

ಜನವರಿ 21ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಸಮಾವೇಶದಲ್ಲಿ ಯಾರೆಲ್ಲಾ ಭಾಗಿ?

ಈ ರಾಜ್ಯ ಮಟ್ಟದ ಸಮಾವೇಶದಲ್ಲಿ ಸಚಿವರು, ಕಾಂಗ್ರೆಸ್ ಶಾಸಕರು, ಸಂಸದರು, ಡಿಸಿಸಿ ಅಧ್ಯಕ್ಷರು, KPCC ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಸದಸ್ಯರು ಭಾಗಿಯಾಗಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments