Site icon PowerTV

ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯೋದ್ರಲ್ಲಿ ಎಕ್ಸ್‌ಪರ್ಟ್‌ : ಸಿಟಿ ರವಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯೋದ್ರಲ್ಲಿ ಎಕ್ಸ್‌ಪರ್ಟ್‌ ಆಗಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಟಾಂಗ್​ ಕೊಟ್ಟಿದ್ದಾರೆ. 

ನಗರದಲ್ಲಿ ಮಾತನಾಡಿದ ಅವರು ರಾಮ ಹಿಂದೂಗಳನ್ನು ಜೋಡಿಸ್ತಾನೆ. ಹಿಂದೂಗಳನ್ನು ಒಡೆಯುವವರು ಸಿದ್ದರಾಮಯ್ಯ ಥರ ಹೇಳಿಕೆ‌ ಕೊಡ್ತಾರೆ. ಅವರು ಒಡೆಯುವುದರಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ. ವೀರಶೈವ ಲಿಂಗಾಯತ ಸಮಾಜ ಒಡೆಯಲು‌ ಹೋಗಿದ್ದ ಸಿದ್ದರಾಮಯ್ಯ, ಸಮಾಜ‌ ಒಡೆಯುವುದರಲ್ಲಿ ಪ್ರೊಡ್ಯೂಸರ್ ಆಗಿದ್ದಾರೆ. ಅವರ ಅಜೆಂಡಾ ಸ್ಪಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಅಯೋಧ್ಯೆಯಲ್ಲಿ ಇದೇ ಜನವರಿ 22ರಂದು ನಡೆಯಲಿರುವ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ. ಶ್ರದ್ಧಾಭಕ್ತಿಯಿಂದ ನಡೆಯಬೇಕಾದ ಧಾರ್ಮಿಕ ಕಾರ್ಯಕ್ರಮವನ್ನು ಬಿಜೆಪಿ ತನ್ನ ರಾಜಕೀಯ ಲಾಭಕ್ಕೆ ಪಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಈ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದರು. ಇದೀಗ ಸಿದ್ದರಾಮಯ್ಯ ಕೂಡ ಹೈಕಮಾಂಡ್ ತೀರ್ಮಾನ ಸರಿಯಾಗಿದೆ ಎಂದು ಒಮ್ಮತ ವ್ಯಕ್ತಪಡಿಸಿದ್ದಾರೆ.

 

 

Exit mobile version