Site icon PowerTV

ಮೈಕೊರೆಯುವ ಚಳಿಗೆ ಭಾರತದ ಆಟಗಾರರು ಗಢಗಢ

ಬೆಂಗಳೂರು : ಅಫ್ಘಾನ್ ವಿರುದ್ಧದ ಟಿ-20 ಪಂದ್ಯಕ್ಕೂ ಮೊದಲೇ ಭಾರತ ತಂಡದ ಆಟಗಾರರು ಗಢಗಢ ನಡುಗುತ್ತಿದ್ದಾರೆ.

ಆಟಗಾರರು ನಡುಗುತ್ತಿರುವುದು ಅಫ್ಘಾನಿಸ್ತಾನ ತಂಡಕ್ಕೆ ಹೆದರಿ ಅಲ್ಲ. ಬದಲಾಗಿ, ಅಲ್ಲಿನ ಮೈಕೊರೆಯುವ ಚಳಿಗೆ. ಉಭಯ ತಂಡಗಳ ಆಟಗಾರರೆಲ್ಲರೂ ಮಂಕಿ ಕ್ಯಾಪ್, ಗ್ಲೌಸ್​ ಹಾಗೂ ಜಾಕೆಟ್ ಮೊರೆ ಹೋಗಿದ್ದಾರೆ.

ಭಾರತ ತಂಡದ ಆಟಗಾರರು ಹಾಗೂ ಕೋಚ್ ರಾಹುಲ್ ದ್ರಾವಿಡ್ ಚಳಿಗೆ ನಡುಗುತ್ತಿರುವ ವಿಡಿಯೋವನ್ನು ಬಿಸಿಸಿಐ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದೆ. ಮೊಹಾಲಿಯ ಐಎಸ್​ ಬಿಂದ್ರಾ ಸ್ಟೇಡಿಯಂನಲ್ಲಿ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೊದಲ ಟಿ-20 ಪಂದ್ಯ ಇಂದು ಸಂಜೆ 7 ಗಂಟೆಗೆ ನಡೆಯಲಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿ.ಕೀ.), ಸಂಜು ಸ್ಯಾಮ್ಸನ್ (ವಿ.ಕೀ.), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ತಂಡ

ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್

Exit mobile version