Site icon PowerTV

ಪರಮೇಶ್ವರ್ ಕೈಕಟ್ಟಿ ಕೂತಿದ್ದಾರೆ : ಬಿಜೆಪಿ ಲೇವಡಿ

ಬೆಂಗಳೂರು : ಶಿವಮೊಗ್ಗಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಗೆ ಸಮನ್ಸ್ ಜಾರಿ ಮಾಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ತೃಪ್ತಿಪಡಿಸಲು ಪೊಲೀಸ್ ವ್ಯವಸ್ಥೆಯನ್ನೇ ದುರ್ಬಳಕೆ ಮಾಡಲಾಗುತ್ತಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೂ ಕೈಕಟ್ಟಿ ಕೂತಿದ್ದಾರೆ ಎಂದು ಕುಟುಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಾವೊಬ್ಬ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ರಾಜಕೀಯ ದ್ವೇಷ ತೀರಿಸಲು ಕಾನೂನು ವ್ಯವಸ್ಥೆಯಲ್ಲೂ ಹಸ್ತಕ್ಷೇಪ ಮಾಡುತ್ತಿದ್ದಾರೆ. ರಾಮ ಭಕ್ತರನ್ನು ವಿನಾಕಾರಣ ಬಂಧಿಸಿ ಜನರಿಂದ ಛೀಮಾರಿ ಹಾಕಿಸಿಕೊಂಡ ಮೇಲೆಯೂ ಕಾಂಗ್ರೆಸ್​ ತನ್ನ ಪರಂಪರೆಯಂತೆ ದ್ವೇಷ ರಾಜಕಾರಣಕ್ಕೆ ಕೈ ಹಾಕಿದೆ ಎಂದು ಕಿಡಿಕಾರಿದೆ.

Exit mobile version