Site icon PowerTV

ಜೈಲಿಂದ ಹೊರ ಬಂದ ತಕ್ಷಣ ಕ್ಷಮೆ ಕೇಳಿದ ಕರವೇ ನಾರಾಯಣಗೌಡ

ಬೆಂಗಳೂರು: ಬಿಡುಗಡೆಯ ಬಳಿಕ ಫೇಸ್ ಬುಕ್ ಮೂಲಕ ಲೈವ್ ಬಂದ ಕರವೇ ಅಧ್ಯಕ್ಷ, ಆರೋಗ್ಯದ ಸಮಸ್ಯೆಯಿಂದ ಇಂದು ಯಾರ ಜೊತೆಯೂ ಮಾತನಾಡೋಕೆ ಆಗ್ಲಿಲ್ಲ. ಅದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ನನ್ನ ದೇಹದ ಕೊನೆಯ ಹನಿ ರಕ್ತ ಇರುವವರೆಗೂ ಕನ್ನಡದ ಹೋರಾಟ ಮಾಡುತ್ತೇನೆ.ಕನ್ನಡ ನಾಮಫಲಕ ಆಂದೋಲನ ಯಶಸ್ವಿಯಾಗಿದೆ. ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದೆ. ಇದು ಕನ್ನಡಿಗರ ಜಯ, ಕರವೇಯ ಜಯ. ಕಾನೂನಿನ ಚೌಕಟ್ಟಿನೊಳಗೆ ಈ ಹೋರಾಟ ಮುಂದುವರಿಸಿಕೊಂಡು ಹೋಗಬೇಕೆನ್ನುವುದು ನಮ್ಮ ಉದ್ದೇಶವಾಗಿತ್ತು ಎಂದು ತಿಳಿಸಿದರು.

ಕೆಲವೊಮ್ಮೆ ಹೋರಾಟದಲ್ಲಿ ತೊಡಕಾಗುವುದು ಸಹಜ. ಪ್ರಾಮಾಣಿಕ ಹೋರಾಟದಲ್ಲಿ ಹೀಗೆಲ್ಲಾ ಆಗುತ್ತೆ. ಈಗ ಹದಿನೈದು ದಿನ ನಾನು ಮತ್ತು ನಮ್ಮ ಕಾರ್ಯಕರ್ತರು ಜೈಲು ಶಿಕ್ಷೆ ಅನುಭವಿಸಿದ್ದೇವೆ. ಇನ್ನೂ ಅನೇಕ ಮೊಕದ್ದಮೆಗಳಿವೆ. ಅದಕ್ಕಾಗಿ ಕಾನೂನು ಹೋರಾಟ ಮಾಡುತ್ತೇವೆ ಎಂದರು.

ಇದೇ ವೇಳೆ ನಾರಾಯಣ ಗೌಡರು ಕನ್ನಡ ಪರ ಚಳುವಳಿಗಾರರು, ಕರವೇ ಮುಖಂಡರು ಹಾಗೂ ಮಾಧ್ಯಮದವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

 

Exit mobile version