Site icon PowerTV

ಶ್ರೀರಾಮನನ್ನು ನಾವು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ನಮ್ಮ ವಿರೋಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾವು ಶ್ರೀರಾಮನನ್ನು ಪೂಜಿಸ್ತೀವಿ, ಬಿಜೆಪಿ ರಾಜಕೀಯಕ್ಕೆ ಮಾತ್ರ ನಮ್ಮ ವಿರೋಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

“ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ, ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ” ಎಂದರು.

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ, ನಾವು ರಾಮಚಂದ್ರನನ್ನು ಪೂಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

 

Exit mobile version