Site icon PowerTV

ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದ : ಪ್ರತಾಪ ಸಿಂಹ

ಬೆಂಗಳೂರು : ಬಿಜೆಪಿ ಸಂಸದ ಪ್ರತಾಪ ಸಿಂಹ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಂದು ಭೇಟಿ ಮಾಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದಗಳನ್ನು ತಿಳಿಸಿದೆ’ ಎಂದು ಪೋಸ್ಟ್​ ಮಾಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್​ ಒಟ್ಟಾಗಿ ಕೆಲಸ ಮಾಡಲಿದೆ. ಮೈತ್ರಿ ಬಳಿಕ ಹಲವು ಬಿಜೆಪಿ ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಇದೀಗ ಸಂಸದ ಪ್ರತಾಪ ಸಿಂಹ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ 126ಕ್ಕೂ ಹೆಚ್ಚು ಮರಗಳನ್ನು ಕಡಿದು ಸಾಗಾಟ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣದಲ್ಲಿ ಸಂಸದ ಪ್ರತಾಪ ಸಿಂಹ ಅವರ ಸಹೋದರ ವಿಕ್ರಂ ಸಿಂಹರ ಹೆಸರು ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಕ್ರಂ ಸಿಂಹರನ್ನು ವಶಕ್ಕೆ ಪಡೆದಿದ್ದರು.

ಮರಗಳ್ಳತನ ಪ್ರಕರಣದ ಆರೋಪಿ ವಿಕ್ರಂ ಸಿಂಹರನ್ನು ಬೇಲೂರು ಸಿವಿಲ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ವಕೀಲ ಚಂದ್ರೇಗೌಡ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಪ್ರಕಾಶ್ ನಾಯ್ಕ್ ಅವರು ಜಾಮೀನು ಮಂಜೂರು ಮಾಡಿದೆ.

Exit mobile version