Site icon PowerTV

ಯುವ ನಿಧಿ ಯೋಜನೆಗೆ ಇಂದು ಅಧಿಕೃತ ಚಾಲನೆ

ಶಿವಮೊಗ್ಗ: ಕಾಂಗ್ರೆಸ್​ನ ಪಂಚಗ್ಯಾರಂಟಿಯಲ್ಲಿ ಒಂದಾದ ಯುವ ನಿಧಿ ಯೋಜನೆ ಇಂದು ಶಿವಮೊಗ್ಗ ನಗರದಲ್ಲಿ ಅಧಿಕೃತ ಚಾಲನೆ ನೀಡಲಾಗುತ್ತದೆ.

ನಗರದ ಹಳೆ ಜೈಲು ಆವರಣದ ಪ್ರೀಡಂ ಪಾರ್ಕ್​ನಲ್ಲಿ ಬೃಹತ್ ವೇದಿಕೆ ಸಿದ್ದಗೊಂಡಿದ್ದು, ಕಾರ್ಯಕ್ರಮದ ವೀಕ್ಷಣೆಗೆ ಬೃಹತ್ ಎಲ್ಇಡಿ ವಾಲ್ ಆಳವಡಿಸಲಾಗಿದೆ.

ಈಗಾಗಲೇ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ನಾಯಕರ ಮತ್ತು ಸ್ಥಳೀಯ ಮುಖಂಡರ ಬ್ಯಾನರ್​ಗಳು, ಪ್ಲೆಕ್ಸ್‌ಗಳು ರಾರಾಜಿಸುತ್ತಿವೆ. ನಗರದ ಹೃದಯ ಭಾಗದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆಯಿದ್ದು ವಾಹನ ದಟ್ಟಣೆ ತಡೆಯಲು ಸುಗಮ ಸಂಚಾರ ಮಾರ್ಗ ಹಾಗೂ ಪಾರ್ಕಿಂಗ್ ವ್ಯವಸ್ಥೆಗೆ ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ.

ಲೋಕಸಭೆ ಚುನಾವಣೆ ಹತ್ತಿರವಾಗ್ತಿರುವ ಸಂದರ್ಭದಲ್ಲಿ 5 ನೇ ಗ್ಯಾರಂಟಿ ಯೋಜನೆಯಾದ ಯುವ ನಿಧಿಯನ್ನು ಜಾರಿಗೆ ತರುತ್ತಿದೆ. ಈಗಾಗಲೇ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಚಾಲನೆ ಸಿಕ್ಕಿದೆ.

 

Exit mobile version