Site icon PowerTV

Yuvanidhi Scheme: ಯುವನಿಧಿ ಯೋಜನೆಗೆ ಸಿಎಂ ಚಾಲನೆ ; ನಿರೋದ್ಯೋಗಿ ಯುವಜನತೆ ಖಾತೆ 3000 ರೂ. ಜಮೆ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೀಡಿದ್ದಾರೆ.ಈ ಮೂಲಕ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಯಿತು.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರನ್ನು ಅರಳಿಸುವ ಮೂಲಕ ಚಾಲನೆ ನೀಡಲಾಗಿದ್ದು, ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಯುವನಿಧಿ ಯೋಜನೆ ಅಡಿ ಭತ್ಯೆ ಸಂದಾಯವಾಗಿದೆ. ಈಗ ನೋಂದಣಿ ಮಾಡಿಕೊಂಡ ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿಯನ್ನು ಜಮೆ ಮಾಡಲಾಯಿತು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Exit mobile version