Site icon PowerTV

ಮೂವರು ಸಾಧುಗಳ ಮೇಲೆ ಮಾರಣಾಂತಿಕ ಹಲ್ಲೆ!

ಪಶ್ಚಿಮ ಬಂಗಾಳ: ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆಂದು ತಿಳಿದು ಮೂವರು ಸಾಧುಗಳ ಮೇಲೆ ಇಲ್ಲಿನ ಸ್ಥಳೀಯರು ದಾಳಿ ನಡೆಸಿರುವ ಘಟನೆ ನಡೆದಿದೆ.

ಮೂರು ಸಾಧುಗಳು – ಒಬ್ಬ ವ್ಯಕ್ತಿ ಮತ್ತು ಅವರ ಇಬ್ಬರು ಪುತ್ರರು – ಉತ್ತರ ಪ್ರದೇಶದಿಂದ ಮಕರ ಸಂಕ್ರಾಂತಿ ಹಬ್ಬಕ್ಕಾಗಿ ಗಂಗಾಸಾಗರ್ ತಲುಪಲು ಗುರುವಾರ ವಾಹನವನ್ನು ಬಾಡಿಗೆಗೆ ಪಡೆದಿದ್ದರು. ಈ ಸಾಧುಗಳು ಮಾರ್ಗ ಮಧ್ಯೆ ದಾರಿ ತಪ್ಪಿದ್ದರು ಮತ್ತು ದಾರಿಯಲ್ಲಿ ಕಂಡ ಇಬ್ಬರು ಹುಡುಗಿಯರ ಬಳಿ ಮಾರ್ಗವನ್ನು ಕೇಳಿದರು. ಆಗ ಹುಡುಗಿಯರು ಹೆದರಿ ಓಡಿಹೋಗಿದ್ದರು. ಇದನ್ನು ಕಂಡ ಸ್ಥಳೀಯರ ಗುಂಪು ಸಾಧುಗಳು ಹುಡುಗಿಯರಿಗೆ ಕಿರುಕುಳ ನೀಡಿದ್ದಾರೆ ಎಂದು ಆಕ್ರೋಶಗೊಂಡ ಸಾಧುಗಳಿಗೆ ಥಳಿಸಿದ್ದರು.

ಇದನ್ನೂ ಓದಿ:  ಪ್ರೀತಿಸುವಂತೆ ಯುವತಿಗೆ ನಿರಂತರ ಕಿರುಕುಳ, ಮನನೊಂದು ಯುವತಿ ಆತ್ಮಹತ್ಯೆ!

ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳೀಯ ಪೊಲೀಸರು ಮಧ್ಯಪ್ರವೇಶಿಸಿ ಸಾಧುಗಳನ್ನು ರಕ್ಷಿಸಿದ್ದರು. ಪುರುಲಿಯಾ ಪೊಲೀಸ್ ವರಿಷ್ಠಾಧಿಕಾರಿ ಅಭಿಜಿತ್ ಬ್ಯಾನರ್ಜಿ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ದಾಳಿಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಲು ಬಲೆ ಬೀಸಲಾಗಿದೆ ಎಂದು ಹೇಳಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಘಟನೆ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ದ ಬಿಜೆಪಿ ಕಿಡಿಕಾರಿದೆ. ಈ ಕುರಿತು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವೀಡಿಯೋವೊಂದನ್ನು ಶೇರ್​ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Exit mobile version