Site icon PowerTV

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ: ಹೆಚ್​ ಡಿ ದೇವೇಗೌಡ

ಬೆಂಗಳೂರು: ನಾನು ಈ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಪ್ರಧಾನಿ H.D.ದೇವೇಗೌಡ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಹಿಂದೂಗಳಿಗೆ ರಾಮ ಒಬ್ಬನೇ ದೇವರಾ?: ಸಚಿವ ಆರ್​.ಬಿ ತಿಮ್ಮಾಪುರ!

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ H.D.ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಪ್ರಧಾನಿ ನರೇಂದ್ರ ಮೋದಿ, ಏನಾದರೂ ಹೇಳಿದರೇ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಇನ್ನು H.D.ಕುಮಾರಸ್ವಾಮಿ ಕೇಂದ್ರ ಸಚಿವರಾಗುವ ವಿಚಾರ ನನ್ನ ಮುಂದೆ ಚರ್ಚೆಯಾಗಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರು ಯಾವುದನ್ನೂ ಬಿಟ್ಟುಕೊಡುವುದಿಲ್ಲ. ಅವರ ಜೊತೆಗಿರುವ ಪೊಲೀಸರಿಗೂ ಗೊತ್ತಾಗಲ್ಲ ಎಂದು ಹೇಳಿದರು.

Exit mobile version