Site icon PowerTV

ಟ್ರ್ಯಾಕ್ಟರ್ ನಿಲ್ಲಿಸುವ ವಿಚಾರಕ್ಕೆ ಡಿಶುಂ ಡಿಶುಂ, ನಾಲ್ವರು ಆಸ್ಪತ್ರೆಗೆ!

ಯಾದಗಿರಿ : ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ಗುರಮಠಕಲ್ ತಾಲ್ಲೂಕಿನ ಎಲ್ಹೇರಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ನಿಲ್ಲಿಸುವ ಸ್ಥಳದ ವಿಚಾರಕ್ಕಾಗಿ ಎರಡೂ ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಮಾತಿಗೆ ಮಾತು ಬೆಳೆದು ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಎರಡೂ ಗುಂಪಿನ ನಡುವೆ ಏರ್ಪಟ್ಟ ಘರ್ಷಣೆಯಲ್ಲಿ ಬಡಿಗೆಯಿಂದ ಒಬ್ಬರಿಗೊಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ.

 

ಗಲಾಟೆಯಲ್ಲಿ ಕಬ್ಬಲಿಗ ಸಮುದಾಯದವರು, ಭೋವಿ ಸಮುದಾಯದ ವ್ಯಕ್ತಿಗಳ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಮಾಡಿದ್ದಾರೆ. ಇನ್ನೂ ಗಲಾಟೆಯಲ್ಲಿ ನಾಲ್ಕು ಜನರು ಗಂಭೀರ ಗಾಯಳಗಿದ್ದು, ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುರಮಠಕಲ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version