ಬೆಂಗಳೂರು : ನಟ ದರ್ಶನ್ ಅಭಿನಯದ ‘ಕಾಟೇರ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿರುವ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ಅವರು ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ‘ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮಕರ ಸಂಕ್ರಾಂತಿಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ.
ಮಕರ ಸಂಕ್ರಾಂತಿಯ ಶುಭಾಶಯಗಳು✨
Happy Makar Sankrathi ✨ pic.twitter.com/8WST8vkmr9
— Aradhanaa (@Aradhanaa_r) January 15, 2024
ಇಬ್ಬರೂ ನಾಯಕಿಯರು ಸಂಕ್ರಾಂತಿ ಪ್ರಯುಕ್ತ ಫೋಟೋ ಶೂಟ್ಗೆ ಫೋಸ್ ನೀಡಿದ್ದು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ರೈತ ಮಹಿಳೆ ಗೆಟಪ್ನಲ್ಲಿ ರಜನಿ
ಸಂಕ್ರಾಂತಿ ಹಬ್ಬದ ಪ್ರಯುಕ್ತ ರಂಜನಿ ರಾಘವನ್ ಫೋಟೋಶೂಟ್ ಮಾಡಿಸಿದ್ದಾರೆ.
ರೈತ ಮಹಿಳೆಯ ರೀತಿ ಕಾಣಿಸಿಕೊಂಡಿರುವ ಅವರು ಆ ಮೂಲಕ ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ.