Site icon PowerTV

ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ : ಮೌನ ಮುರಿದ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಕುರಿತ ವಿವಾದಾತ್ಮಕ ಹೇಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮೌನ ಮುರಿದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅನಂತ್ ಕುಮಾರ್ ಹೆಗಡೆ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.

ಮೊದಲೇ ರಾಜಕಾರಣಿಗಳು ಅಂದ್ರೆ ಜನ‌ ನಂಬಲ್ಲ, ಅಂಥ‌ ಪರಿಸ್ಥಿತಿ‌ ಇದೆ. ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತು ಇರಬೇಕು. ಅನಂತ್ ಕುಮಾರ್ ಹೆಗಡೆ ಹೇಳಿಕೆಗಳನ್ನು ನಾನೂ ಗಮನಿಸಿದ್ದೇನೆ. ನಾನು ಅವರ ಜತೆಗೂ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

ಹೇಳಿಕೆ ಎಲ್ಲರೂ ಒಪ್ಪುವಂತಿರಬೇಕು

ಅನಂತ್ ಕುಮಾರ್ ಅವರು ಹೇಳಿರೋದೆಲ್ಲ ಅವರ ವೈಯಕ್ತಿಕ ಅಭಿಪ್ರಾಯಗಳು. ಇದಕ್ಕೂ ಪಕ್ಷಕ್ಕೂ ಸಂಬಂಧ ಕಲ್ಪಿಸುವುದು ಬೇಡ. ಇದರ ಬಗ್ಗೆ ಅವರ ಜತೆ ವೈಯಕ್ತಿಕವಾಗಿ ಮಾತನಾಡುತ್ತೇನೆ. ರಾಜಕಾರಣಿಗಳು ಅಂದ್ರೆ ನೋಡುವ ದೃಷ್ಟಿ ಬದಲಾಗಿದೆ. ಯಾರೇ ಆದರೂ ಕೊಡುವ ಹೇಳಿಕೆ ಎಲ್ಲರೂ ಒಪ್ಪುವಂತಿರಬೇಕು ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

Exit mobile version