Site icon PowerTV

ಪಾಪ ಅವ್ರು ಆರೋಗ್ಯದ ಬಗ್ಗೆ ಗಮನ ಕೊಡಲಿ : ಡಿ.ಕೆ. ಶಿವಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕುರಿತು ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅವರ ಮುಖಂಡರೇ ಹೆಲ್ತ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರ ಮುಖಂಡರೇ ಹೇಳಿಕೆ ಸರಿಯಲ್ಲ ಅಂತಿದ್ದಾರೆ, ಆ ರೀತಿ ಹೇಳೋದು ಸರಿಯಲ್ಲ ಅಂದಿದ್ದು ಸಂತೋಷ. ಅವರ ಹೆಲ್ತ್ ಬಗ್ಗೆ ಅವರು ಗಮನ ಕೊಡಲಿ ಎಂದು ನಯವಾಗಿಯೇ ಕುಟುಕಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷರ ನೇಮಕ ಆಗಬಹುದು, ಯಾವ ಗಳಿಗೆಯಲ್ಲಿ ಬೇಕಾದ್ರೂ ಆಗಬಹುದು. ಇನ್ನು ಮುಂದಕ್ಕೆ ಹೋಗುವ ಸಾಧ್ಯತೆಯಿಲ್ಲ. ಆಗಬಹುದು, ಆಗುತ್ತದೆ. ಇಲ್ಲವಾದರೆ ಸಂಜೆ ಮಾತನಾಡುತ್ತೇನೆ. ಚುನಾವಣೆ ಸಮಯದಲ್ಲಿ ನಾವು ಯಾರು ಯಾರಿಗೆ ಮಾತು ಕೊಟ್ಟಿದ್ದೇವೆ, ಅದನ್ನು ಈಡೇರಿಸುತ್ತೇವೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಫೈನಲ್ ಬಗ್ಗೆ ಚರ್ಚೆ

ಜನವರಿ 21 ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಲೋಕಸಭಾ ಚುನಾವಣೆ ಸಂಬಂದಿಸಿದಂತೆ ಸಭೆ ನಡೆಯಲಿದೆ. ಜನವರಿ 19ರಂದು ಎಲೆಕ್ಷನ್ ಕಮಿಟಿ ಮೀಟಿಂಗ್ ಇದೆ. ಅಂದು ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಬೆಂಗಳೂರಿನ ಇಂದಿರಾ ಭವನದಲ್ಲಿ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಫೈನಲ್ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Exit mobile version