Site icon PowerTV

ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಕರ ಸಂಕ್ರಾಂತಿ ಹಾಗೂ ಪೊಂಗಲ್ ಪ್ರಯುಕ್ತ ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಕನ್ನಡ ಭಾಷೆಯಲ್ಲಿ ಸೇರಿದಂತೆ ದಕ್ಷಿಣ ಭಾರತದ ಇತರ ಭಾಷೆಗಳಲ್ಲೂ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ.

‘ಈ ಪ್ರಕೃತಿಯ ಹಬ್ಬದಂದು, ಉತ್ತರಾಯಣ ಸೂರ್ಯ ದೇವರು ನನ್ನ ದೇಶದ ಎಲ್ಲಾ ಕುಟುಂಬ ಸದಸ್ಯರಿಗೆ ಸಂತೋಷ, ಸಮೃದ್ಧಿ, ಅದೃಷ್ಟ ಹಾಗೂ ಉತ್ತಮ ಆರೋಗ್ಯವನ್ನು ನೀಡಲಿ ಎಂದು ನಾನು ಬಯಸುತ್ತೇನೆ’ ಎಂದು ಪೋಸ್ಟ್​ ಮಾಡಿದ್ದಾರೆ.

“ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ” ಎಂದು ಕನ್ನಡದಲ್ಲೇ ಪೋಸ್ಟ್​ ಮಾಡಿದ್ದಾರೆ.

Exit mobile version