ಶಿವಮೊಗ್ಗ : ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ? ಎಂದು ಕೇಳುವ ನೀವು, ಕಾಂಗ್ರೆಸ್ ಸರ್ಕಾರ ಏನು ಮಾಡಿದೆ? ಎಂದು ಮೊದಲು ಲೆಕ್ಕ ಕೊಡಿ, ಆಮೇಲೆ ಮಾತನಾಡಿ ಎಂದು ಸಂಸದ ಬಿ.ವೈ. ರಾಘವೇಂದ್ರ ಗುಡುಗಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಹೊಸ ಅಭಿವೃದ್ಧಿ ಯೋಜನೆಗಳಿಗೆ ದುಡ್ಡು (ಅನುದಾನ)ಕೊಡೋದಿರಲಿ, ಸದ್ಯ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಧಮ್ಕಿ ಹಾಕೋದು ನಿಲ್ಲಿಸಿದರೆ ಸಾಕು ಎಂದು ಛೇಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡುತ್ತಾರೆ ಎಂದು ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ಸಿಗರದ್ದು ಇದ್ಯಾವ ಸೀಮೆ ರಾಜಕೀಯ?
ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮತ್ತು ಉಸ್ತುವಾರಿ ಸಚಿವರು ಪದೇ ಪದೆ ಅಡ್ಡಗಾಲು ಹಾಕುತ್ತಲೇ ಇದ್ದಾರೆ. ಅದರಲ್ಲೂ ಜಿಲ್ಲೆಯ 10 ಪ್ರವಾಸೋದ್ಯಮ ಸ್ಥಳಗಳ ಅಭಿವೃದ್ಧಿಗೆ ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದಿರುವ ಸರ್ಕಾರದ್ದು ಇದ್ಯಾವ ಸೀಮೆ ರಾಜಕೀಯ? ಎಂದು ಬಿ.ವೈ. ರಾಘವೇಂದ್ರ ಪ್ರಶ್ನೆ ಮಾಡಿದ್ದಾರೆ.



Hey there! This is my 1st comment here so I just wanted to give a quick shout out and tell you I genuinely enjoy reading your blog posts. Can you suggest any other blogs/websites/forums that cover the same topics? Thank you!
biggest escort directory Brazil