Site icon PowerTV

ನಿದ್ರೆ ಸಾಮ್ರಾಜ್ಯದ ಸಿದ್ದರಾಮಯ್ಯ..! : ವಿಜಯೇಂದ್ರ ತಿರುಗೇಟು

ಬೆಂಗಳೂರು : ಗಾಢ ನಿದ್ರೆಯೇ ಪ್ರಧಾನಿ ಮೋದಿಯವರ ಮಂತ್ರ ಎಂದು ಲೇವಡಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳುವ’ ನಿದ್ರೆ ಸಾಮ್ರಾಜ್ಯದ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿಯವರ ಹೆಗಲ ಮೇಲೆ ತಮ್ಮ ನಿದ್ರೆ ಸುಖದ ಚಿತ್ರಣ ಸೃಷ್ಟಿಸಿ ವಿಕೃತ ಆನಂದ ಪಡೆಯಲು ಹೊರಟಿದ್ದಾರೆ ಎಂದು ಟ್ವೀಟ್​ ಮೂಲಕ ಟಾಂಗ್ ಕೊಟ್ಟಿದ್ದಾರೆ.

ಮೋದಿಯವರ ನಡೆ, ನುಡಿ, ಕ್ರಿಯಾಶೀಲತೆ ಶ್ರೀರಾಮಚಂದ್ರನ ಅನುಗ್ರಹದ ನೆರಳಿನಂತಿದೆ. ‘ರಾಮ ರಾಜ್ಯದ ಪರಿಕಲ್ಪನೆ ಮೋದಿಯವರ ಕಾಲದಲ್ಲಿ ಮಾತ್ರ ಸಾಧ್ಯ’ ಎನ್ನುವುದು ಜನವರಿ 22ರಂದು ಲೋಕಾರ್ಪಣೆಗೊಳ್ಳುತ್ತಿರುವ ಶ್ರೀರಾಮ ಮಂದಿರ ಹಾಗೂ ಬಾಲರಾಮನ ಪ್ರತಿಷ್ಠಾಪನೆಯ ಕ್ಷಣಗಳು ಸಾಕ್ಷಿ ಹೇಳಲಿವೆ ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಗಾಢ ನಿದ್ರೆಯೊಂದೇ ಮೋದಿ ಮಂತ್ರ : ಸಿದ್ದರಾಮಯ್ಯ ಲೇವಡಿ

ನಿದ್ರೆ ಸುಖವೇನೆಂದು ಅರಿಯದ ತಪಸ್ವಿ ‘ಮೋದಿ’

ಸೂರ್ಯ ಮುಳುಗಿದರೆ ಕತ್ತಲೆ, ಚಂದ್ರ ಮೇಲೆದ್ದು ಬಂದರೆ ನಿದ್ರೆ. ಸೂರ್ಯ- ಚಂದ್ರರಿಬ್ಬರೂ ವಿಶ್ರಾಂತಿ, ಸುಖ ನಿದ್ರೆಗಳನ್ನು ಅನುಭವಿಸಿರಬಹುದು. ಆದರೆ, ತಮ್ಮ ಬದುಕಿನ ಪುಟದಲ್ಲಿ ವಿರಮಿಸುವ ಪದವನ್ನೇ ಕಾಣದ, ನಿದ್ರೆ ಸುಖವೇನೆಂದು ಅರಿಯದ ಒಬ್ಬ ತಪಸ್ವಿ ಆಡಳಿತಗಾರನನ್ನು ಈ ದೇಶ ಕಂಡಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ. ಅವರ ಜೀವನ ಚರಿತ್ರೆ ಹಾಗೂ 10 ವರ್ಷದ ಅವರ ಆಡಳಿತವನ್ನು ಕಣ್ಣಾರೆ ಕಂಡಿರುವ ಶತಕೋಟಿ ಭಾರತೀಯರು ಇದನ್ನು ಎದೆ ತಟ್ಟಿ ಹೇಳುತ್ತಾರೆ ಎಂದು ವಿಜಯೇಂದ್ರ ಚಾಟಿ ಬೀಸಿದ್ದಾರೆ.

Exit mobile version