Site icon PowerTV

ಇನ್ನೊಂದು ವಾರದಲ್ಲಿ ರಾಜ್ಯದ ರೈತರ ಖಾತೆಗೆ ಬರಪರಿಹಾರ ಹಣ ಜಮೆ!

ರಾಯಚೂರು: ರಾಜ್ಯದ 25 ರಿಂದ 30 ಲಕ್ಷ ರೈತರ ಖಾತೆಗೆ ಇನ್ನೊಂದು ವಾರದಲ್ಲಿ ಬರಪರಿಹಾರದ ಮೊದಲ ಕಂತಿನ ಹಣ ಜಮೆಯಾಗಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ರಾಯಚೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಈ ಹಿಂದೆ ಬರಪರಿಹಾರ, ಅತಿವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಬೆಳೆಯದಿದ್ದರೂ ಅವರಿಗೆ ಪರಿಹಾರದ ಹಣ ಸಿಗುತ್ತಿತ್ತು. ನಿಜವಾಗಿ ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ. ಹಿಂದಿನ ಸರಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ಇದನ್ನು ನೋಡಿದ್ದೇನೆ ಎಂದರು.

ಇದನ್ನೂ ಓದಿ: ಲಾರಿ ಪಲ್ಟಿ, ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ

ಯಾರದೋ ಜಮೀನು, ಇನ್ಯಾರಿಗೋ ಹಣ ಪಾವತಿಯಾಗಿದೆ. ರೈತರ ಬೆಳೆಯೇ ಬೇರೆ, ಪರಿಹಾರ ಬರೋದೆ ಬೇರೆ. ಅಧಿಕಾರಿಗಳು ಬೆಳೆ ಮಾಹಿತಿ ಸೇರಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲವನ್ನೂ ಸರಿಮಾಡಿ ಬೆಳೆ ಸಮೀಕ್ಷೆ ಆಧಾರದಲ್ಲಿ ಹಣ ಪಾವತಿಯಾಗಲಿದೆ ಎಂದು ಸಚಿವರು ವಿವರ ನೀಡಿದರು.

ಈ ವ್ಯವಸ್ಥೆ ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಮುಂದಿನ ಒಂದು ವಾರದಲ್ಲಿ ಮೊದಲ ಕಂತಿನ ಹಣ ಬರಲಿದೆ. 12 ಲಕ್ಷ ಜನರಿಗೆ ಹಣ ಪಾವತಿಸಲು ಆರ್‌ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ ಜನರ ಪೇಮೆಂಟ್ ಆರ್ಡರ್ ಒಂದು ವಾರದಲ್ಲಿ ಕಳುಹಿಸಲಿದ್ದೇವೆ. ಒಟ್ಟು 25-30 ಲಕ್ಷ ಜನರಿಗೆ ಬರ ಪರಿಹಾರದ ಹಣ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

Exit mobile version