Site icon PowerTV

ನಾಳೆ ಬೆಂಗಳೂರಿನಲ್ಲಿ ಅಂತಿಮ ಟಿ-20 ಪಂದ್ಯ, ಸರಣಿ ಕ್ಲೀನ್ ಸ್ವೀಪ್ ನಿರೀಕ್ಷೆಯಲ್ಲಿ ಭಾರತ

ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ-20 ಸರಣಿಯ ಅಂತಿಮ ಪಂದ್ಯ ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿರುವ ಭಾರತ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್​ ಮಾಡುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನ ಭಾರತದ ವಿರುದ್ಧ ಚೊಚ್ಚಲ ಟಿ-20 ಪಂದ್ಯ ಗೆಲ್ಲುವ ಕನಸು ಕಾಣುತ್ತಿದೆ.

ಭಾರತ ತಂಡದ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದರು. ಈ ವೇಳೆ, ಅಪಘಾತದಿಂದ ಒಂದು ವರ್ಷದಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಕಾಣಿಸಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂತ್ ಕೆಲವು ತಿಂಗಳುಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್

ಅಫ್ಘಾನಿಸ್ತಾನ ತಂಡ

ಇಬ್ರಾಹಿಂ ಝದ್ರಾನ್ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ಇಕ್ರಮ್ ಅಲಿಖಿಲ್, ಹಜರತುಲ್ಲಾ ಝಜೈ, ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಂ ಜನತ್, ಅಜ್ಮುಲ್ಲಾ ಉಮರ್ಜಾಯ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ಫರೀದ್ ಅಹ್ಮದ್, ನವೀನ್ ಉಲ್ ಹಕ್, ನೂರ್ ಅಹ್ಮದ್, ಮೊಹಮ್ಮದ್ ಸಲೀಂ, ಖೈಸ್ ಅಹ್ಮದ್, ಗುಲ್ಬದಿನ್ ನೈಬ್ ಮತ್ತು ರಶೀದ್ ಖಾನ್

Exit mobile version