Site icon PowerTV

ಇಂದಿನಿಂದ ಪೀಣ್ಯ ಫ್ಲೈ ಓವರ್ ಬಂದ್!: ಪರ್ಯಾಯ ಮಾರ್ಗಗಳು ಹೀಗಿವೆ

ಬೆಂಗಳೂರು: ಬೆಂಗಳೂರು- ತುಮಕೂರು- ಹಾಸನ ರಸ್ತೆಗಳ ಕಡೆಗೆ ಸಂಚರಿಸುವ ವಾಹನ ಸವಾರರಿಗೆ ಹೆದ್ದಾರಿ ಇಲಾಖೆ ಶಾಕ್‌ ನೀಡಿದೆ.

ಹೌದು, ಇಂದಿನಿಂದ ಪೀಣ್ಯ ಫ್ಲೈ ಓವರ್‌ ಮೂರು ದಿನ ಬಂದ್‌ ಆಗಲಿದೆ. ಪರ್ಯಾಯ ಮಾರ್ಗಗಳನ್ನು ಟ್ರಾಫಿಕ್‌ ಇಲಾಖೆ ನೀಡಿದೆ.

ಇಂದು ರಾತ್ರಿ 11 ಗಂಟೆಯಿಂದ ಪೀಣ್ಯ ಮೇಲ್ಸೇತುವೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಲೋಡ್ ಟೆಸ್ಟಿಂಗ್ ಹಿನ್ನೆಲೆ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದ್ದು, ಇಂದು ರಾತ್ರಿ 11 ಗಂಟೆಯಿಂದ ಜ.19ರ ಬೆಳಗ್ಗೆ 11 ಗಂಟೆ ತನಕ ಬಂದ್ ಆಗಿರುತ್ತದೆ.

ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಎಲಿವೇಟೆಡ್ ಹೈವೇಗೆ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಸೆತುವೆ) ಅಳವಡಿಸಿದ್ದ ವಯಾಡಕ್ಟ್ ದುರಸ್ತಿ ಮಾಡಲಾಗುತ್ತಿದೆ. ವಯಾಡಕ್ಟ್‌ನ ಸಮಗ್ರತೆ ಪರಿಶೀಲನೆ & ಲೋಡ್ ಟೆಸ್ಟಿಂಗ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ.

ಪರ್ಯಾಯ ಮಾರ್ಗಗಳು ಹೀಗಿದೆ

1) ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು

ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ ಹೆಚ್-4

ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ- ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್ ಎಸ್‌ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು.

2) ಸಿಎಂಟಿಐ ಜಂಕ್ಷನ್‌ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು

ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್ ಹೆಚ್-4 ಸರ್ವಿಸ್ ರಸ್ತೆಯ ಮೂಲಕ 8ನೇ ಮೈಲಿ-

ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್- ಎಸ್‌ಆರ್‌ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದು.

 

 

 

 

 

Exit mobile version