Site icon PowerTV

‘ಪಪ್ಪು ಸ್ವರ್ಗ’ದಲ್ಲಿ ಸಿದ್ದು ನೆಮ್ಮದಿಯ ನಿದ್ರೆ : ಸಿ.ಟಿ. ರವಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ತನ್ನ ನಾಯಕ ಪಪ್ಪುವಿನPappus Heaven’ನಲ್ಲಿ ನೆಮ್ಮದಿಯಿಂದ ನಿದ್ರಾದೇವಿಯ ಮಡಿಲಲ್ಲಿ ಮಲಗಬಹುದು ಅಂದುಕೊಂಡಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಕುಟುಕಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ತಾನು ಮಾಡಬೇಕಾದ ಕೆಲಸಗಳನ್ನೆಲ್ಲ ಪ್ರಧಾನಿ ಮೋದಿ ಮಾಡುತ್ತಾರೆ. ರಾಜ್ಯ ಸರರ್ಕಾರದ ಎಲ್ಲಾ ವೈಫಲ್ಯಗಳಿಗೆ ಮತ್ತು ಅಸಮರ್ಥತೆಗೆ ಪ್ರಧಾನಿ ಮೋದಿಯವರನ್ನು ದೂಷಿಸಿ, ಬಚಾವಾಗಬಹುದು ಅಂತ ತಿಳಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಅಲ್ಲಮ ಪ್ರಭು ‘ಕೊಟ್ಟ ಕುದುರೆಯನೇರಲರಿಯದವ ವೀರನೂ ಅಲ್ಲ ಶೂರನೂ ಅಲ್ಲ’ ಎಂದರು. ‘ಕೈಲಾಗದವ ಮೈಪರಚಿಕೊಂಡ’ ಎಂಬ ಗಾದೆಯಂತೆ ಸಿಎಂ ಸಿದ್ದರಾಮಯ್ಯ ಆಡಳಿತ ನಡೆಸಲಾಗದೆ ರಾಜ್ಯದ ಆರ್ಥಿಕ, ಸಾಮಾಜಿಕ ಪರಿಸ್ಥಿತಿಯನ್ನು ಹಾಳುಗೆಡವುತ್ತಿದ್ದಾರೆ. ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕುರಿತಾಗಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದು ಕನ್ನಡಿಗರ ದುರಂತ ಎಂದು ಛೇಡಿಸಿದ್ದಾರೆ.

ಸಿದ್ದು ನಿದ್ರಾಸನದಲ್ಲಿಯೇ ಇರುತ್ತಾರೆ

ಪ್ರಧಾನಿ ಮೋದಿಯವರು ಕಳೆದ 23 ವರ್ಷಗಳಿಂದ ಗುಜರಾತ್‌ನ ಮುಖ್ಯಮಂತ್ರಿಯಾಗಿ ಮತ್ತು ಭಾರತದ ಪ್ರಧಾನಿಯಾಗಿ ನಿತ್ಯ 16 ರಿಂದ 18 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದಾರೆ. ಇದು ಇಡೀ ಜಗತ್ತಿಗೆ ತಿಳಿದಿದೆ. ಸಿಎಂ ಸಿದ್ದರಾಮಯ್ಯನವರು ಕೆಲಸ ಮಾಡುವುದಕ್ಕಿಂತ ಹೆಚ್ಚು ನಿದ್ರಾಸನದಲ್ಲಿಯೇ ಇರುತ್ತಾರೆ. ಇನ್ನು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅವರೇನು ಮಾಡುತ್ತಾರೆ ಎಂಬುದು ನಾನೇನು ವಿಶೇಷವಾಗಿ ಹೇಳಬೇಕಾಗಿಲ್ಲ, ಇಡೀ ಜಗತ್ತಿಗೆ ಗೊತ್ತು ಎಂದು ಸಿ.ಟಿ. ರವಿ ಚಾಟಿ ಬೀಸಿದ್ದಾರೆ.

Exit mobile version