Site icon PowerTV

ಅಫ್ಘಾನಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ಬೆಂಗಳೂರು : ಅಫ್ಘಾನಿಸ್ತಾನ ವಿರುದ್ಧದ 3ನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸಂಜೆ 7 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯವನ್ನು ಗೆದ್ದು ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಳ್ಳಲು ರೋಹಿತ್ ಪಡೆ ಸಿದ್ಧವಾಗಿದೆ.

ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತಿರುವ ಅಫ್ಘಾನಿಸ್ತಾನ್ ತಂಡ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ವೈಟ್ ವಾಶ್ ತಪ್ಪಿಸಿಕೊಳ್ಳಲು ರಣತಂತ್ರ ರೂಪಿಸಿದೆ. ಹೀಗಾಗಿ, ಚಿನ್ನಸ್ವಾಮಿ ಮೈದಾನದಲ್ಲಿ ಇಂದು ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸಂಜು ಸ್ಯಾಮ್ಸನ್(ವಿ.ಕೀ), ಶಿವಂ ದುಬೆ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಅವೇಶ್ ಖಾನ್

ಅಫ್ಘಾನಿಸ್ತಾನ ತಂಡ

ಇಬ್ರಾಹಿಂ ಝದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ನಜೀಬುಲ್ಲಾ ಝದ್ರಾನ್, ಕರೀಂ ಜನತ್, ಶರಫುದ್ದೀನ್ ಅಶ್ರಫ್, ಖೈಸ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫರೀದ್ ಅಹ್ಮದ್ ಮಲಿಕ್

Exit mobile version