Site icon PowerTV

ಜ.19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ!

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನವರಿ 19 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ ಸಾಧ್ಯತೆ ಇದೆ.

ಖೇಲೋ ಇಂಡಿಯಾ ಹಾಗೂ ಏರೋನಾಟಿಕ್ಸ್ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ತೆರಳುವ ಸಂದರ್ಭದಲ್ಲಿ ಮೋದಿ ಅವರು ಬೆಂಗಳೂರಿಗೂ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯ ಕಾರಣ ಜನವರಿ 19ರಂದು ನಿಗದಿಯಾಗಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆ ಮುಂದೂಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ: ಯತೀಂದ್ರ

ಪ್ರಧಾನಿಯವರು ಬೆಂಗಳೂರಿಗೆ ಭೇಟಿ ನೀಡುವ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದಿಂದ ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಬಿಜೆಪಿ ರಾಜ್ಯ ನಾಯಕರು ಇದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಪ್ರಧಾನಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ, ರೋಡ್​ ಶೋ ಸಂಬಂಧ ಬಿಜೆಪಿಯ ನಾಯಕರು ಅಧಿಕೃತ ಹೇಳಿಕೆ ನೀಡಿಲ್ಲ.

Exit mobile version