Site icon PowerTV

ಘೋರ ದುರಂತ.. 12 ಮಕ್ಕಳು, ಇಬ್ಬರು ಶಿಕ್ಷಕರು ಜಲಸಮಾಧಿ

ಬೆಂಗಳೂರು : ಗುಜರಾತ್​ನ ವಡೋದರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, 12 ಮಕ್ಕಳು ಹಾಗೂ ಇಬ್ಬರು ಶಿಕ್ಷಕರು ಜಲಸಮಾಧಿಯಾಗಿದ್ದಾರೆ.

ವಡೋದರದ ಹರಣಿ ಸರೋವರದಲ್ಲಿ ವಿದ್ಯಾರ್ಥಿಗಳಿದ್ದ ದೋಣಿಯೊಂದು ಮುಗುಚಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 12 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರು ಸೇರಿದಂತೆ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಮದುವರಿದಿದೆ. ಬದುಕುಳಿದ ವಿದ್ಯಾರ್ಥಿಗಳನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅನೇಕ ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. 10 ಆಂಬುಲೆನ್ಸ್ಗಳು ಕೂಡ ಸ್ಥಳಕ್ಕೆ ಆಗಮಿಸಿವೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.​

Exit mobile version