Thursday, August 28, 2025
HomeUncategorizedಸೂರ್ಯಗೆ ಯಶಸ್ವಿ ಶಸ್ತ್ರಚಿಕಿತ್ಸೆ, SKY ಐಪಿಎಲ್ ಆಡೋದು ಡೌಟ್?

ಸೂರ್ಯಗೆ ಯಶಸ್ವಿ ಶಸ್ತ್ರಚಿಕಿತ್ಸೆ, SKY ಐಪಿಎಲ್ ಆಡೋದು ಡೌಟ್?

ಬೆಂಗಳೂರು : ಭಾರತದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಜರ್ಮನಿಯ ಮ್ಯೂನಿಚ್‌ನಲ್ಲಿ ಯಶಸ್ವಿ ಸೊಂಟದ (ತೊಡೆಸಂದು) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಸೂರ್ಯಕುಮಾ‌ರ್ ಅವರ ಪತ್ನಿ ದೇವಿಶಾ ಅವರೊಂದಿಗೆ ಜರ್ಮನಿಯಲ್ಲಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ಸೂರ್ಯ ಕುಮಾರ್ ಅವರು ಭಾರತ ಮತ್ತು ಅಫ್ಘಾನಿಸ್ಥಾನ ನಡುವಿನ ರೋಚಕ ಹಣಾಹಣಿಯನ್ನು ವೀಕ್ಷಿಸಿ ಸಂಭ್ರಮಿಸಿದ್ದಾರೆ.

ಶಸ್ತ್ರಚಿಕಿತ್ಸೆ ನಡೆದಿದೆ, ಎಲ್ಲರ ಕಾಳಜಿ ಮತ್ತು ನನ್ನ ಆರೋಗ್ಯ ಚೇತರಿಕೆಗೆ ಕೋರಿದ ಶುಭಾಶಯಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಮತ್ತು ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ನಿಮಗೆ ಹೇಳಲು ನನಗೆ ಸಂತೋಷಪಡುತ್ತೇನೆ ಎಂದು ಸೂರ್ಯಕುಮಾರ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

SKY ಐಪಿಎಲ್​ ಆಡೋದು ಡೌಟ್?

ಒಂದು ವಾರದಲ್ಲಿ ಸೂರ್ಯಕುಮಾರ್ ಯಾದವ್ ಭಾರತಕ್ಕೆ ಮರಳುವ ಸಾಧ್ಯತೆಯಿದೆ. ಬಳಿಕ, ಬೆಂಗಳೂರಿನ ಎನ್​ಸಿಎಯಲ್ಲಿ ರಿಹ್ಯಾಬ್​ನಲ್ಲಿರುವುದಾಗಿ ತಿಳಿಸಿದ್ದಾರೆ. ಸೂರ್ಯ ಎರಡನೇ ಬಾರಿ ತೊಡೆಸಂದು ಗಾಯಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈಗ ಚೇತರಿಸಿಕೊಳ್ಳಲು ಎರಡು ತಿಂಗಳು ಬೇಕಾಗಬಹುದು. ಐಪಿಎಲ್​-2024 ರ ವೇಳೆಗೆ ಫಿಟ್ ಆಗಬಹುದು ಎಂದು ಹೇಳಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments