Tuesday, August 26, 2025
Google search engine
HomeUncategorizedತಮಿಳುನಾಡಿಗೆ ನಿತ್ಯ 998 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ತಮಿಳುನಾಡಿಗೆ ನಿತ್ಯ 998 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ದೆಹಲಿ: ಕಾವೇರಿ ನೀರು ವ್ಯಾಜ್ಯ ನ್ಯಾಯಾಧೀಕರಣದ ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ.

ಸಿಡಬ್ಲ್ಯುಆರ್​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್​​ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್​​ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ CWRC ಸೂಚನೆ ನೀಡಿದೆ.

ಇದನ್ನೂ ಓದಿ: ಇಂದಿನಿಂದ ಪೀಣ್ಯ ಪ್ಲೈಓವರ್ ಸಂಚಾರಕ್ಕೆ ಮುಕ್ತ!

ಈಗಾಗಲೇ ಬಾಕಿ ಇರಿಸಿಕೊಂಡಿರುವ 7.61 ಟಿಎಂಸಿಎಫ್​ಟಿ ನೀರನ್ನು ಮೇ ತಿಂಗಳ ಒಳಗೆ ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಸಭೆಯಲ್ಲಿ ತಮಿಳುನಾಡು ಸರ್ಕಾರ ಮನವಿ ಮಾಡಿತು

ಕಾವೇರಿ ಜಲಾನಯನ ಪ್ರದೇಶದ ಎಲ್ಲ ನಾಲ್ಕು ಜಲಾಶಯಗಳಲ್ಲಿ ಕೂಡ ಶೇ 52ರಷ್ಟು ಸಂಗ್ರಹ ಕೊರತೆ ಇದೆ ಎಂದು ಕರ್ನಾಟಕ ತನ್ನ ವಾಸ್ತಾವಾಂಶವನ್ನು ಸಭೆಯ ಮುಂದಿರಿಸಿ ತಮಿಳುನಾಡಿನ ಬೇಡಿಕೆಯನ್ನು ಒಪ್ಪಲಾಗದು ಎಂದು ವಾದ ಮಂಡಿಸಿತು. ಅಷ್ಟೆ ಅಲ್ಲದೇ, ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುವವರೆಗೆ ಕುಡಿಯುವ ನೀರು ಮತ್ತು ನೀರಾವರಿಯ ಬೇಡಿಕೆಯನ್ನು ಪೂರೈಸಲು ಕಾವೇರಿ ಜಲಾನಯನ ಪ್ರದೇಶಗಳ ಜಲಾಶಯಗಳಲ್ಲಿ ಲಭ್ಯವಿರುವ ನೀರು ಅತೀ ಅಗತ್ಯ ಎಂದು ಕರ್ನಾಟಕ ವಾದಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments