Site icon PowerTV

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ಆಗುತ್ತಿಲ್ಲ, ವಿಷಾದ ವ್ಯಕ್ತಪಡಿಸುತ್ತೇನೆ:HDK

ಬೆಂಗಳೂರು: ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಆಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಇಂದು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಅವರನ್ನು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಸ್ವಾಗತ ಕೋರಲು ಆಗುತ್ತಿಲ್ಲ ಎಂದು ತಮ್ಮ ಸಮಾಜಿಕ ಜಾಲ ತಾಣ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಾಮ ಮಂದಿರ ಉದ್ಘಾಟನೆಗೆ ಆಗಮಿಸಲಿರುವ ಗಣ್ಯರಿಗಾಗಿ ಕಾಯುತ್ತಿದೆ ವಿಶೇಷ ಉಡುಗೊರೆ!

ರಾಜ್ಯಕ್ಕೆ ಭೇಟಿ ನೀಡಿರುವ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಗೆ ಅತ್ಯಂತ ಪ್ರೀತಿ, ಆದರಪೂರ್ವಕ ಸ್ವಾಗತ, ಸುಸ್ವಾಗತ. ಮಾನ್ಯ ಪ್ರಧಾನಿಗಳನ್ನು ಸ್ವಾಗತಿಸಲು ನಾನು ಸಹ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಬೇಕಿತ್ತು. ನಿನ್ನೆಯಷ್ಟೇ ನವದೆಹಲಿಯಿಂದ ಬೆಂಗಳೂರಿಗೆ ವಾಪಸ್ ಬಂದ ನನಗೆ ಶೀತ ಲಕ್ಷಣ ಕಾಣಿಸಿಕೊಂಡಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದೇನೆ. ಗೌರವಾನ್ವಿತ ಪ್ರಧಾನಿಗಳನ್ನು ಖುದ್ದು ಸ್ವಾಗತಿಸಲು ಸಾಧ್ಯವಾಗದಿದ್ದಕ್ಕೆ ವಿಷಾದಿಸುತ್ತೇನೆ ಹಾಗೂ ಪ್ರಧಾನಿಗಳ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಲಿ ಎಂದು ತುಂಬು ಹೃದಯದಿಂದ ಹಾರೈಸುತ್ತೇನೆ. ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Exit mobile version