Site icon PowerTV

ಸಾನಿಯಾ ಬಿಟ್ಟು ನಟಿ ಸನಾ ಜಾವೇದ್​ ಕೈ ಹಿಡಿದ ಶೋಯೇಬ್ ಮಲ್ಲಿಕ್​!

ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟ್ ಆಟಗಾರ ಶೋಯೆಬ್ ಮಲ್ಲಿಕ್ ಮತ್ತೊಂದು ಮದುವೆಯಾಗಿದ್ದು ಇವರ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂಬ ವದಂತಿ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಮಲಿಕ್ ಅವರು ನಟಿ ಸನಾ ಜಾವೇದ್ ಅವರನ್ನು ವಿವಾಹವಾಗಿದ್ದಾರೆ. ಸನಾ ಜಾವೇದ್ ಅವರೊಂದಿಗೆ ಹಸೆಮಣೆ ಏರಿರುವ ಫೋಟೊಗಳನ್ನು ಶೋಯಬ್ ಮಲಿಕ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ನರೇಗಾದಲ್ಲಿ ಅಕ್ರಮ ಎಸಗಿದ ಒಂದೇ ಜಿಲ್ಲೆಯ 32 ಪಿಡಿಒ ಗಳ ಅಮಾನತು!

ಸಾನಿಯಾ ಮಿರ್ಜಾ ಹಾಗೂ ಶೋಯೆಬ್ ಮಲಿಕ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳು ಇತ್ತೀಚೆಗೆ ಹರಿದಾಡಿದ್ದವು. ಬುಧವಾರವಷ್ಟೇ ಸಾನಿಯಾ ಮಿರ್ಜಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದ ಪೋಸ್ಟ್‌ವೊಂದು ಇದಕ್ಕೆ ಪುಷ್ಠಿ ನೀಡುವಂತಿತ್ತು.

Exit mobile version