Site icon PowerTV

ವಕೀಲರ ಮೇಲೆ ಹಲ್ಲೆ : ಆರೋಪಿಗಳ ಬಂಧನಕ್ಕೆ ಆಗ್ರಹ

ಬೀದರ್ : ವಕೀಲರೊಬ್ಬರ ಮೇಲೆ ತಡರಾತ್ರಿ ನಡೆದ ಹಲ್ಲೆ ಖಂಡಿಸಿ ವಕೀಲರು ಪ್ರತಿಭಟನೆ ನಡೆಸಿ ಕೂಡಲೇ ಹಲ್ಲೆ ಆರೋಪಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಎಸ್‌ಪಿ ಅವರಿಗೆ ಮನವಿ ಸಲ್ಲಿಸಿ ಬಂಧಿಸುವಂತೆ ಒತ್ತಾಯಿಸಿದರು.

ಎರಡು ತಿಂಗಳ ಹಿಂದೆ ನಮ್ಮ ವಾಹನಕ್ಕೆ ಡಿಕ್ಕಿ ಹೊಡಿಸಿದ್ದೀಯಾ ಎಂದು ಖ್ಯಾತೆ ತೆಗೆದು ವಕೀಲ ಹನುಮಂತರಾವ ಮೇಲೆ ನಿನ್ನೆ ರಾತ್ರಿ 11 ಗಂಟೆಗೆ ಹಲ್ಲೆ ನಡೆಸಿದ್ದಾರೆ. ಜೀವ ಭಯದಿಂದ ವಕೀಲ ಹನುಮಂತರಾವ್ ತಪ್ಪಿಸಿಕೊಂಡು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ರು, ಪೊಲೀಸರು ಆರೋಪಿಗಳನ್ನ ಬಂಧಿಸದೇ ಸುಮ್ಮನಿದ್ದಾರೆ ಎಂದು ದೂರಿದ್ದಾರೆ.

ಹಲ್ಲೆ ಕೃತ್ಯ, ಹಲ್ಲ ನಡೆಸಿದ ಆರೋಪಿಗಳ ಮನೆ ಮುಂದೆ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆದ್ರೂ ಆರೋಪಿಗಳನ್ನ ಬಂದಿಸುವಲ್ಲಿ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಆರೋಪಿಗಳನ್ನ ಬಂಧಿಸದೇ ಇದ್ದರೇ ಮುಂದಿನ ದಿನಗಳಲ್ಲಿ ಜಿಲ್ಲಾ ವಕೀಲರ ಸಂಘದಿಂದ ಉಗ್ರವಾದ ಹೋರಾಟ ನಡೆಸಲಾಗುವುದು. ಹಾಗಾಗಿ, ಕೂಡಲೇ ಆರೋಪಿಗಳನ್ನ ಬಂಧಿಸಿ ಎಂದು ಡಿಎಸ್‌ಪಿ ಶಿವನಗೌಡ ನಾಯಕ್‌ಗೆ ಮನವಿ ಸಲ್ಲಿಸಿದರು.

Exit mobile version