Site icon PowerTV

Rashmika Mandanna: ಡೀಪ್‌ ಫೇಕ್‌ ಮಾಡಿದಾತನ ಬಂಧನ; ನಟಿ ರಶ್ಮಿಕಾ ಹೇಳಿದ್ದೇನು?

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರನ್ನು ಚಿತ್ರವನ್ನು ಬಳಸಿ, ಡೀಪ್‌ಫೇಕ್ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ವಿಡಿಯೋವೊಂದನ್ನು ರಶ್ಮಿಕಾ ಅವರ ಮುಖದೊಂದಿಗೆ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿತ್ತು. ವಿಡಿಯೋ ವೈರಲ್ ಆಗಿ, ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದೀಗ, ಆರೋಪಿಯನ್ನು ಬಂಧಿಸಲಾಗಿದೆ.

ದೆಹಲಿ ಪೊಲೀಸರಿಗೆ ಧನ್ಯವಾದ ಹೇಳಿದ ರಶ್ಮಿಕಾ ಮಂದಣ್ಣ

ದೆಹಲಿ ಪೊಲೀಸರಿಗೆ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆರೋಪಿಯನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ಪ್ರೀತಿಯಿಂದ, ಬೆಂಬಲದಿಂದ ಮತ್ತು ನನ್ನನ್ನು ರಕ್ಷಿಸುವ ಸಮುದಾಯಕ್ಕೆ ನಿಜವಾಗಿಯೂ ಕೃತಜ್ಞರಾಗಿರುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಡಿಜಿಟಲ್ ಮಾರ್ಕೆಟರ್ ಈಮಣಿ ನವೀನ್ ಬಂಧಿತ ಆರೋಪಿ. ಇನ್‌ಸ್ಟಾಗ್ರಾಮ್‌ನಲ್ಲಿ ಫಾಲೋವರ್‌ಗಳ ಸಂಖ್ಯೆ ಹೆಚ್ಚಿಸಿಕೊಳ್ಳಲು ಈ ವಿಡಿಯೋ ಸೃಷ್ಟಿಸಿದ್ದಾಗಿ ಆರೋಪಿ ವಿಚಾರಣೆಯ ವೇಳೆ ಹೇಳಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಎಐ ಸಹಾಯದಿಂದ ಸೃಷ್ಟಿಸಲಾದ ರಶ್ಮಿಕಾ ಮಾದಣ್ಣ ಅವರ ಡೀಪ್‌ಫೇಕ್ ವಿಡಿಯೊ ಕಳೆದ ವರ್ಷ ನವೆಂಬರ್‌ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಟಿಯ ಅಭಿಮಾನಿ ಎಂದು ಹೇಳಿಕೊಂಡ ನವೀನ್ ಸೃಷ್ಟಿಸಿದ್ದ, ಈ ವಿಡಿಯೊ ದೇಶದಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತ್ತು.

ಮೂಲ ವಿಡಿಯೊವನ್ನು ಬ್ರಿಟಿಷ್ ಭಾರತೀಯ ಮೂಲದ ಝರಾ ಪಟೇಲ್ ಅವರು 2023ರ ಅಕ್ಟೋಬರ್ 9 ರಂದು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದರು. ನಂತರ ಅದನ್ನು ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೊವನ್ನು ರಚಿಸಲಾಗಿತ್ತು.

 

 

Exit mobile version