Site icon PowerTV

ಖ್ಯಾತ ಫುಟ್ಬಾಲ್ ಆಟಗಾರ ಮೊನೀಶ್ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ರಾಜ್ಯಮಟ್ಟದ ಖ್ಯಾತ ಫುಟ್‌ಬಾಲ್‌ ಆಟಗಾರ ಕೆ. ಮೊನೀಶ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು ಎಂದು ಬರೆದುಕೊಂಡಿದ್ದಾರೆ.

ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುಣಮುಖರಾಗುತ್ತಾರೆಂದು ನಂಬಿದ್ದೆ, ಈಗ ಆ ನಂಬಿಕೆ ಹುಸಿಯಾಗಿದೆ. ಕ್ರೀಡಾ ಬದುಕಿನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಿದ್ದ ಯುವ ಪ್ರತಿಭೆಯೊಂದು ಹೀಗೆ ಆರಂಭದಲ್ಲೇ ಅಂತ್ಯ ಕಂಡಿದ್ದು ಅತ್ಯಂತ ದುಃಖದ ವಿಚಾರ. ಮೃತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯ

ಮೊನೀಶ್ ಅವರು ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಕೆ.ಆರ್. ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು ಈಗಲ್ಸ್ ಪರ ಮೊನೀಶ್ ಕಣಕ್ಕೆ

ಬಾಬುಸಾಪಾಳ್ಯ ನಿವಾಸಿಯಾಗಿದ್ದ ಮೊನೀಶ್ ಪರಿಕ್ರಮ ಎಫ್.ಸಿ, ಡೆಕ್ಕನ್ ಎಫ್.ಸಿ, ಯಂಗ್ ಚಾಲೆಂಜರ್ಸ್ ಎಫ್.ಸಿ ಸೇರಿದಂತೆ ವಿವಿಧ ಕ್ಲಬ್‌ಗಳ ಪರ‌ ಕಣಕ್ಕಿಳಿದಿದ್ದರು. ಪ್ರಸ್ತುತ ಬೆಂಗಳೂರು ಡಿಸ್ಟ್ರಿಕ್ಟ್ ಫುಟ್‌ಬಾಲ್‌ ಅಸೋಸಿಯೇಷನ್ (ಬಿಡಿಎಫ್ಎ) ಎ ಡಿವಿಷನ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು ಈಗಲ್ಸ್ ಎಫ್.ಸಿ ಪರ ಆಡುತ್ತಿದ್ದರು.

Exit mobile version