Site icon PowerTV

ರಾಜ್ಯದಲ್ಲಿ ನಾಳೆ ಸಾರ್ವತ್ರಿಕ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಜೆ ಘೋಷಿಸುವಂತೆ ಎಲ್ಲರೂ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ದೆಹಲಿ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಹೇಳಿದರು.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ; ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ

ಶ್ರೀ ರಾಮನ ಬ್ಯಾನರ್ ಗಳನ್ನು ಹಾಕಿದರೆ ನಮ್ಮ ಕಾರ್ಯಕರ್ತರನ್ನು ಪೊಲೀಸರು ಬೆದರಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ? ನಿನ್ನೆ ಎಷ್ಟೇ ಹಾವೇರಿಯಲ್ಲಿ ಪ್ರತಿಭಟನೆಯನ್ನು ಮಾಡಿದ್ದೇವೆ.ಆಗಲೇ ಹಾವೇರಿಯಲ್ಲಿ ಮತ್ತೊಂದು ಘಟನೆ ನಡೆದಿದೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

Exit mobile version