Site icon PowerTV

ಅಯೋಧ್ಯೆಗೆ ಹೊರಟ ಮಾಜಿ ಪ್ರಧಾನಿ ದೇವೇಗೌಡ ಕುಟುಂಬ

ಬೆಂಗಳೂರು: ಕನ್ನಡಿಗ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಹೊರಟಿದ್ದಾರೆ.

ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟ ವಿಮಾನದಲ್ಲಿ ದೇವೇಗೌಡರ ಕುಟುಂಬದ ಸದಸ್ಯರಾದ ಶ್ರೀಮತಿ ಚನ್ನಮ್ಮ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ನಟ ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರಿಗೆ ಸಾಥ್‌ ನೀಡಿದ್ದಾರೆ.

ಇದನ್ನೂ ಓದಿ: ಡಿಕೆಶಿ ಅಪ್ಪ ಬಂದ್ರೂ ನನ್ನನ್ನು ಹತ್ತಿಕ್ಕಲು ಆಗಲ್ಲ: ರಮೇಶ್​ ಜಾರಕಿಹೊಳಿ

ಅಯೋಧ್ಯೆಗೆ ತೆರಳುವ ಮುನ್ನ ಮಾತನಾಡಿದ ಅವರು, ನಾನು ನನ್ನ ಪತ್ನಿ, ಕುಮಾರಸ್ವಾಮಿ, ನಿಖಿಲ್ ಅಯೋಧ್ಯೆಗೆ ಹೋಗ್ತಿದ್ದೇವೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮ ಮಾಡ್ತಿರೋದು ಅವರ ಪೂರ್ವ ಜನ್ಮದ ಪುಣ್ಯವಾಗಿದೆ. ಅವರಿಗೆ ಈ ಕೆಲಸ ಮಾಡೋ ಶಕ್ತಿಯೂ ಕೂಡ ಪೂರ್ವ ಜನ್ಮದ ಪುಣ್ಯದಿಂದಲೇ ಸಿಕ್ಕಿದೆ.

ಮಾಜಿ ಪ್ರಧಾನಿ ವಾಜಪೇಯಿ ಕೂಡ 6 ವರ್ಷ ಪ್ರಧಾನಿ ಆಗಿದ್ದರು. ಆದರೆ, ರಾಮ ಮಂದಿರದ ಮೊದಲ ಕಲ್ಲು ಸ್ವೀಕಾರ ಮಾಡೋಕು ಅವತ್ತು ವಾಜಪೇಯಿ ಅವರಿಗೆ ಕಷ್ಟ ಆಯ್ತು. ಇದು ಮೋದಿ ಅವರ ಪೂರ್ವ ಜನ್ಮ ಪುಣ್ಯವಾಗಿದೆ ಎಂದು ಅವರು ಹೇಳಿದರು.

Exit mobile version