Site icon PowerTV

ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ : ಸಿದ್ದರಾಮಯ್ಯ

ಬೆಂಗಳೂರು : ನಾನು ನಾಸ್ತಿಕನಲ್ಲ, ಆಸ್ತಿಕ. ನಮ್ಮ ಊರಿನಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

ಬೆಂಗಳೂರಿನ ಹಿರಂಡಹಳ್ಳಿಯಲ್ಲಿ ರಾಮ ಮಂದಿರ  ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತೇವೆ, ಗುಡಿ ಕಟ್ಟುತ್ತೇವೆ ಹೇಳಿದ್ದಾರೆ.

ಅಧರ್ಮದ, ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಶ್ರೀರಾಮನ ಆಶಯ. ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? : ರಾಮ ಬೆಂಕಿಯಲ್ಲ, ರಾಮ ವಿವಾದ ಅಲ್ಲ, ಶ್ರೀ ರಾಮ ಶಕ್ತಿ : ಪ್ರಧಾನಿ ಮೋದಿ

ರಾಮ, ಸೀತೆಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ

ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲ ಸಕುಟುಂಬಸ್ಥರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Exit mobile version