Site icon PowerTV

ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ..? : ರಾಮನನ್ನು ಸ್ಮರಿಸಿದ ನಟ ಸುದೀಪ್

ಬೆಂಗಳೂರು : ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯ ನಡೆದಿದ್ದು, ಭಾರತದ ಹಲವಾರು ಸೆಲೆಬ್ರಿಟಿಗಳು ಈ ಐತಿಹಾಸಿಕ ಘಟನೆಗೆ ಸಾಕ್ಷಿಯಾಗಿದ್ದಾರೆ. ನಟ ಕಿಚ್ಚ ಸುದೀಪ್ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ ರಾಮ..? ಎಂದು ಬರೆದುಕೊಂಡಿದ್ದಾರೆ. ‘ರಾಮ ಜಯ ರಾಮ. ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ. ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ’ ಎಂದು ಹೇಳಿದ್ದಾರೆ.

‘ಗುಡಿಯೊಳಗೆ ನಿನ್ನ ಕಣ್ತುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ? ನಿನ್ನ ಕೀರ್ತನೆಗೆ ಎರಡೇ ಕಿವಿಗಳು.. ನಮ್ಮದು ಎಂತಹ ಪುಣ್ಯ, ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ. ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ. ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ’ ಎಂದು ತಿಳಿಸಿದ್ದಾರೆ.

ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮ

ಮುಂದುವರಿದು, ‘ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ನಿನ್ನ ಕೆತ್ತಲು ಕಲಾಶೀರ್ವಾದವಾದೆ. ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮ. ಇದು ಕರ್ನಾಟಕಕ್ಕೆ ನಿಜವಾದ ಸಮ್ಮಾನ. ಜೈ ಶ್ರೀರಾಮ್’ ಎಂದು ಪೋಸ್ಟ್ ಮಾಡಿದ್ದಾರೆ.

Exit mobile version