Site icon PowerTV

ಒಂದು ವಾರದ ಹಿಂದೆಯಷ್ಟೇ ಉದ್ಘಾಟನೆಗೊಂಡಿದ್ದ ಅಟಲ್‌ ಸೇತು ಮೇಲೆ ಮೊದಲ ಅಪಘಾತ!

ಮುಂಬೈ: ಇತ್ತೀಚೆಗೆ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಮುಂಬೈನ ದೇಶದ ಅತಿ ಉದ್ದದ ಸಮುದ್ರ ಸೇತುವೆ ಮೇಲೆ ಇಂದು ಮೊದಲ ಅಪಘಾತದ ವರಿಯಾಗಿದೆ.

ಇದನ್ನೂ ಓದಿ: ದೇವಾಲಯ ಪ್ರವೇಶ ನಿರಾಕರಣೆ: ನಾನು ಮಾಡಿರುವ ಅಪರಧವೇನು ಎಂದ ರಾಹುಲ್ ಗಾಂಧಿ!

ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‌ನಲ್ಲಿ (ಅಟಲ್ ಸೇತು) ಮೊದಲ ಅಪಘಾತ ಸಂಭವಿಸಿದೆ. ಚಾಲಕನಿಂದ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡಿದಿದೆ. ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ.

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಗಾಯಗಳಾಗಿವೆ, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ ಕಾರು ಅವರು ಚಿರ್ಲೆಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಅಪಘಾತಕ್ಕೊಳಗಾದವರ ಬಗ್ಗೆ ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.

Exit mobile version