Site icon PowerTV

ಮಣ್ಣಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಶಿಕ್ಷಕಿ ಶವ ಪತ್ತೆ!

ಮಂಡ್ಯ: ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಿನ್ನೆ ಸಂಜೆ ನಡೆದಿದೆ.

ದೀಪಿಕಾ(28) ಎಂಬಾಕೆಯೇ ಕೊಲೆಯಾದ ದುರ್ದೈವಿಯಾಗಿದ್ದಾಳೆ. ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ್ದಾರೆ ದುಷ್ಕರ್ಮಿಗಳು. ಕೊಲೆಯಾದ ಮಹಿಳೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದಾಳೆ. ದೀಪಿಕಾ ಮೇಲುಕೋಟೆಯ ಎಸ್‌ಇಟಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು. ಶಾಲೆಗೆ ಹೋಗಿ ಆನಂತರ ದೀಪಿಕಾ ನಾಪತ್ತೆಯಾಗಿದ್ದಳು.

ಇದನ್ನೂ ಓದಿ: ಬಿಯರ್ ಪ್ರಿಯರಿಗೆ ಶಾಕ್ ನೀಡಲು ಸರ್ಕಾರ ತಯಾರಿ!

ಜನವರಿ 20ರ ಮಧ್ಯಾಹ್ನದಿಂದ ದೀಪಿಕಾ ನಾಪತ್ತೆಯಾಗಿದ್ದಳು. ನಾಪತ್ತೆಯಾದ ಬಗ್ಗೆ ಕುಟುಂಬಸ್ಥರು ಜ.20ರ ಸಂಜೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ನಿನ್ನೆ ಸಂಜೆ ಮೇಲೆಕೋಟೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿದೆ. ಮಹಿಳೆ ನಾಪತ್ತೆ, ಕೊಲೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಶಿಕ್ಷಕಿ ದೀಪಿಕಾ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಆಕ್ಟೀವ್ ಆಗಿದ್ದರು ಎಂದು ತಿಳಿದು ಬಂದಿದೆ.

Exit mobile version