Site icon PowerTV

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕ

ತುಮಕೂರು : ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹೇಯ ಕೃತ್ಯ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಹೊರವಲಯದ ಬೆಳಗುಂಬ ಬಳಿಯ ನಾಗರಾಜು ಲೇಔಟ್​ನಲ್ಲಿ ಘಟನೆ ನಡೆದಿದೆ. ಮನು ಎಂಬ ಆಟೋ ಚಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪಿಯಾಗಿದ್ದಾನೆ.

ಸ್ನೇಹಿತೆಯ ಮನೆಗೆ ನೋಟ್ಸ್ ಕೇಳಲು ಹೋಗುತ್ತಿದ್ದ ಬಾಲಕಿಯನ್ನು ಬಲವಂತವಾಗಿ ಆಟೋದಲ್ಲಿ ಹತ್ತಿಸಿಕೊಂಡಿದ್ದಾನೆ. ಹತ್ತಿರದಲ್ಲೇ ಇದ್ದ ಲೇಔಟ್​ಗೆ ಬಾಲಕಿಯನ್ನು ಕರೆದು ಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ ಕೂಡಲೇ ಬಾಲಕಿಯ ಪೋಷಕರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್ ದಾಖಲು ಮಾಡಿರುವ ಮಹಿಳಾ ಠಾಣಾ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದು ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಳೆದ ಮೂರು ತಿಂಗಳ ಹಿಂದೆಯೂ ಸಹ ಆಟೋ ಚಾಲಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿ ಗೂಸಾ ತಿಂದು ಜೈಲು ಸೇರಿದ್ದ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ.

Exit mobile version