Site icon PowerTV

ಬಿಜೆಪಿ ರಾಮನನ್ನು ಸೀತೆಯಿಂದ ಬೇರ್ಪಡಿಸಿದೆ : ಸಿದ್ದರಾಮಯ್ಯ

ಮೈಸೂರು : ಬಿಜೆಪಿಯವರು ರಾಮನನ್ನು ಸೀತೆಯಿಂದ ಬೇರ್ಪಡಿಸಿದ್ದಾರೆ. ರಾಮ‌ನನ್ನು ಮಾತ್ರ ಉಳಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಮುತ್ತಿನಮುಳುಸೋಗೆಯಲ್ಲಿ 79 ಗ್ರಾಮಗಳ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾವು ಮಹಾತ್ಮ ಗಾಂಧಿ ಹೇಳುವ ರಾಮನ ಮೇಲೆ ನಂಬಿಕೆ ಇಟ್ಟಿದ್ದೇವೆ. ರಘುಪತಿ ರಾಘವ ರಾಜಾರಾಮ್, ಪತೀತ‌ ಪಾವನ ಸೀತಾರಾಮ್ ಅಂತ ಹೇಳಿದ್ದಾರೆ. ನಾವು ಪೂಜಿಸುವ ರಾಮನ ಜತೆಗೆ ಸೀತೆ, ಲಕ್ಷ್ಮಣ, ಹನುಮಂತ ಇರುತ್ತಾರೆ. ಅದಕ್ಕೆ ನಾವು ಸೀತಾರಾಮ ಅಂತ ಕರೆಯುತ್ತೇವೆ. ಬಿಜೆಪಿಯವರು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದಲೇ ಸೀತೆ, ಲಕ್ಷ್ಮಣ, ಹನುಮಂತನನ್ನು ಬೇರ್ಪಡಿಸಿದ್ದಾರೆ ಎಂದು ಕುಟುಕಿದರು.

ನರೇಂದ್ರ ಮೋದಿ ಕೆಲಸ ಮಾಡಿಲ್ಲ

ನರೇಂದ್ರ ಮೋದಿ ಕೆಲಸ ಮಾಡಿಲ್ಲ. ಎರಡು ಕೋಟಿ ಉದ್ಯೋಗ ಕೊಡಿಲಲ್ಲ. ಮೋದಿಯವರು ನುಡಿದಂತೆ ನಡೆಯಲು ಸಾಧ್ಯವಾಗಿಲ್ಲ. ಅದಕ್ಕೆ ರಾಮನನ್ನು ಮುಂದಿಟ್ಟುಕೊಂಡು ಬಂದಿದ್ದಾರೆ. ಪೆಟ್ರೋಲ್, ಡೀಸೆಲ್, ಗೊಬ್ಬರದ ಬೆಲೆ ಬಗ್ಗೆ ಮಾತನಾಡಲ್ಲ. ಈಗ ರಾಮ ರಾಮ ಅಂತಿದ್ದಾರೆ. ಜನ ಬುದ್ದಿವಂತರು, ಎಲ್ಲವೂ ಅರ್ಥ ಆಗುತ್ತೆ ಎಂದು ಸಿದ್ದರಾಮ್ಯ ಚಾಟಿ ಬೀಸಿದರು.

Exit mobile version