Site icon PowerTV

ರಾಜ್ಯಾದ್ಯಂತ ಒಣ ಹವೆ ಮುಂದುವರಿಕೆ!

ಬೆಂಗಳೂರು: ಇಂದು ರಾಜ್ಯಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರು ಸುತ್ತಮುತ್ತ ಆಕಾಶ ನಿರ್ಮಲವಾಗಿರಲಿದೆ. ಬೆಳಗಿನ ಜಾವ ದಟ್ಟ ಮಂಜು ಮುಸುಕುವ ಸಾಧ್ಯತೆ ಇದ್ದರೆ, ನಂತರ ಬಿಸಿಲು ಹೆಚ್ಚಿರಲಿದೆ. ರಾತ್ರಿ ಹೊತ್ತು ಕೊರೆಯುವ ಚಳಿ ಇರಲಿದೆ. ಗರಿಷ್ಠ ಉಷ್ಣಾಂಶವು 29 ಹಾಗೂ ಕನಿಷ್ಠ ಉಷ್ಣಾಂಶವು 17 ಡಿ.ಸೆ ಇರಲಿದೆ.

ಇದನ್ನೂ ಓದಿ: ಬಜೆಟ್​ ಅಧಿವೇಶನ: ಸಂಸತ್ ಭವನದ ಭದ್ರತೆಗಾಗಿ 140 CISF ನಿಯೋಜನೆ!

ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಸೆಕೆಯು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version